Film & EntertainmentKannada NewsKarnataka News

*ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹುಲಿ ಉಗುರು ಧರಿಸಿದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟ ದರ್ಶನ್ ಹಾಗೂ ವಿನಯ್ ಗುರೂಜಿಗೂ ಕಾನೂನು ಸಂಕಷ್ಟ ಎದುರಾಗಿದೆ.

ಹುಲಿ ಉಗುರು ಧಾರಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ನಟ ದರ್ಶನ್ ಹಾಗೂ ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎಂಬ ಆರೋಪದ ಮೇಲೆ ವಿನಯ್ ಗುರೂಜಿ ವಿರುದ್ಧ ಸರ್ವಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಎಂಬುವವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.

Home add -Advt

ನಟ ದರ್ಶನ್ ಹಾಕಿರುವ ಚಿನ್ನದ ಚೈನ್ ನಲ್ಲಿ ಹುಲಿ ಉಗುರು ಇದೆ. ಅಲ್ಲದೇ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತುಕೊಳ್ಳುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹುಲಿ ಉಗುರು ಧರಿಸಿದ ಕಾರಣಕ್ಕೆ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ. ಅದೇ ರೀತಿ ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನಟ ದರ್ಶನ್ ಅವರು ಅರಣ್ಯ ಇಲಾಖೆ ರಾಯಭಾರಿಯೂ ಆಗಿದ್ದಾರೆ. ಹಾಗಿರುವಾಗ ಅವರಿಗೆ ಕನಿಷ್ಠ ಪ್ರಜ್ಞೆ ಇಲ್ಲವೇ? ಅವರು ಧರಿಸಿರುವ ಹುಲಿ ಉಗುರು ಅಸಲಿಯೋ, ನಕಲಿಯೋ ಎಂಬುದನ್ನು ಅರಣ್ಯಾಧಿಕಾರಿಗಳು ಪರಿಶೀಲಿಸಬೇಕು ಎಂದಿದ್ದಾರೆ.


Related Articles

Back to top button