
ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.
ಕೆಲ ದಿನಗಳ ಹಿಂದೆ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳಿಗೆ ವಿಷಪ್ರಾಶನ ಮಾಡಿ ಹತ್ಯೆ ಮಾಡಲಾಗಿತ್ತು. ಹುಲಿ ಹಸುವನ್ನು ಕೊಂದು ತಿಂದಿದ್ದಕ್ಕೆ ಹಸುವಿನ ಮಾಲೀಕ ಸೇರಿ ಮೂವರು ವಿಷಪ್ರಾಶನ ಮಾಡಿಸಿ ಐದು ಹುಲಿಗಳ ಸಾವಿಗೆ ಕಾರಣರಾಗಿದ್ದರು. ಪ್ರಕರಣ ಸಂಬಂಧ ಹಸು ಮಾಲೀಕ ಸೇರಿ ಮೂವರನ್ನು ಬಂಧಿಸಲಾಗಿತ್ತು.
ಇದೀಗ ಈ ಪ್ರಕರಣದಲ್ಲಿ ಅರಣ್ಯ ಅಧಿಕಾರಿಗಳ ಕರ್ತವ್ಯಲೋಪ, ನಿರ್ಲಕ್ಷ್ಯ ಕೂಡ ಎದ್ದುಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಡಿಸಿಎಫ್ ಚಕ್ರಪಾಣಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.