Latest

ಖ್ಯಾತ ಟಿಕ್ ಟಾಕ್ ಸ್ಟಾರ್ ಬಂಧನ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಟಿಕ್ ಟಾಕ್ ಸ್ಟಾರ್, ಫನ್ ಬಕೆಟ್ ಯೂಟ್ಯೂಬ್ ಚಾನಲ್ ಖ್ಯಾತಿಯ ಭಾರ್ಗವ ನನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ.

ಫನ್ ಬಕೆಟ್ ಚಾನಲ್ ಮೂಲಕ ಜನಪ್ರಿಯತೆ ಪಡೆದಿದ್ದ ಭಾರ್ಗವ ಓ ಮೈ ಗಾಡ್ ಎಂಬ ಟಿಕ್ ಟಾಕ್ ವಿಡಿಯೋ ಮೂಲಕ ಗಮನ ಸೆಳೆದಿದ್ದ. ಈಗ 14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಭಾರ್ಗವನ ವಿರುದ್ಧ ಬಾಲಕಿ ಕುಟುಂಬಸ್ಥರು ವಿಶಾಖಪಟ್ಟಣಂ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯಡಿ ಭಾರ್ಗವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆತನನ್ನು ಬಂಧಿಸಿದ್ದಾರೆ.
ಕೆಪಿಎಸ್ ಸಿ ಪರೀಕ್ಷೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button