Belagavi NewsBelgaum NewsKannada NewsKarnataka NewsNationalPolitics

*ಜಿಲ್ಲಾ ವಿಭಜನೆಗೆ ಕಾಲ ಕೂಡಿ ಬರಬೇಕು: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ವಿಭಜನೆಗೆ ಕಾಲ ಕೂಡಿ ಬರಬೇಕು. ಶೀಘ್ರದಲ್ಲೇ ಸರಕಾರ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ 14 ತಿಂಗಳಿನಿಂದ ಸರಕಾರ ಜನಪರ ಕೆಲಸ ಮಾಡಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಕೊಡಲಾಗಿದೆ ಜಿಲ್ಲೆಯಲ್ಲಿ ಹೆಚ್ಚು ಶಾಲೆ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದರು.

ಮಳೆಗಾಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ರಸ್ತೆಗಳು ಹಾಳಾಗಿವೆ ಅವುಗಳ ದುರಸ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಹೊಸ ರಸ್ತೆ ಮಾಡಲು ಅವಕಾಶ ಇಲ್ಲ. ಕೇಂದ್ರ ಸಚಿವ ಗಡ್ಕರಿ ಅವರು ಸಹ ದುರಸ್ತಿ ಮಾಡಬೇಕಾದ ರಸ್ತೆಗಳ ಮಾಹಿತಿ ಕೇಳಿದ್ದಾರೆ. ರಿಂಗ್ ರಸ್ತೆಗೆ ಅನುಮೋದನೆ ನೀಡಲಾಗಿದೆ. ಜಮೀನು ಭೂ ಸ್ವಾಧೀನ ಪಡೆಸಿಕೊಳ್ಳಬೇಕು ಎಂದರು.

ಜಿಲ್ಲಾ ವಿಭಜನೆ ಮಾಡುವಕ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಜಿಲ್ಲೆ ವಿಭಜನೆ ಮಾಡುವುದು ಸರಕಾರ ನಿರ್ಧಾರ ಮಾಡುತ್ತದೆ ಜಿಲ್ಲಾ ವಿಭಜನೆಗೆ ಕಾಲ ಬರುತ್ತದೆ. ನೋಡಬೇಕು ಯಾವಾಗ ಬರುತ್ತದೆಯೋ ಎನ್ನುವುದು ಎಂದರು.

ಗ್ಯಾರಂಟಿ ಯೋಜನೆ ನಿರಂತರವಾಗಿ ನಡೆಯುತ್ತದೆ. ಅದನ್ನು ಯಾವುದೇ ಕಾರಣಕ್ಕೂ ಸ್ಥಗಿತ ಮಾಡುವುದಿಲ್ಲ. ಜನರ ಮನಸ್ಸಿನಲ್ಲಿ ಏನಿದೆ ಎನ್ನುವುದು ನೋಡಬೇಕು. ನಾನು ಎಂದಿಗೂ ಗ್ಯಾರಂಟಿ ಯೋಜನೆ ಸ್ಥಗಿತ ಮಾಡಬೇಕು ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದರು.

ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button