National

*ಟೈಮ್ಸ್ ಟವರ್ ನಲ್ಲಿ ಭಾರಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಟೈಮ್ಸ್ ಟವರ್ ಕಟ್ಟಡಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡ ಬೆಂಕಿಯಲ್ಲಿ ಹೊತ್ತಿ ಉರುದ ಘಟನೆ ಮುಂಬೈ ನಗರದಲ್ಲಿ ನಡೆದಿದೆ.

ಕಟ್ಟಡದ ಕೆಳಭಾಗದಲ್ಲಿ ಕಾಣಿಸಿಕೊಂಡ ಬೆಂಕಿ 7 ಅಂತಸ್ತಿನವರೆಗೆ ವ್ಯಾಪಿಸಿದೆ. ಟೈಮ್ಸ್ ಟವರ್ ನ ಕಮಲಾ ಮಿಲ್ ಕಾಂಪೌಂಡ್ ನ ಲೋವರ್ ಪರೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ಟೈಮ್ಸ್ ಟವರ್ ನ 7 ಅಂತಸ್ತಿನವರೆಗೆ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ.

ಘಟನಾ ಸ್ಥಳಕ್ಕೆ 9 ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button