
ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಗಹ್ಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಮಾದಪಟ್ಟಣ ಗೇಟ್ ಬಳಿಯ ಮೈಸೂರು-ಊಟಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇರಳದ ಕಲ್ಪೆಟ್ಟ ಮೂಲದ ರಶೀದ್ ಹಾಗೂ ನಾಜಿರಾ ಮೃತರು. ಗಾಯಾಳುಗಳನ್ನು ಮೈಸೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


