
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಟಿಪ್ಪರ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿ ನಡೆದಿದೆ.
ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಟಿಪ್ಪರ್ ಲಾರಿ ಕಾರಿನ ಮೇಲೆಯೇ ಬಿದ್ದಿದೆ. ಪರಿಣಾಮ ಕಾರು ಚಾಲಕ ಹಾಗೂ ಆತನ ಜೊತೆಯಲ್ಲಿದ್ದ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.