Kannada NewsKarnataka NewsLatest
*5 ವರ್ಷದ ಬಾಲಕನ ಮೇಲೆ ಹರಿದ ಟಿಪ್ಪರ್: ಅಮ್ಮನ ಕಣ್ಣೆದುರೇ ಸ್ಥಳದಲ್ಲೇ ಪ್ರಾಣ ಬಿಟ್ಟ ಬಾಲಕ*

ಪ್ರಗತಿವಾಹಿನಿ ಸುದ್ದಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿಯಾಗಿ, ಕೆಳಗೆ ಬಿದ್ದ ಬಾಲಕನ ಮೇಲೆಯೇ ಟಿಪ್ಪರ್ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. 5 ವರ್ಷದ ಭುವೀನ್ ಮೃತ ಬಾಲಕ. ಬಾಲಕನ ತಾಯಿ ಬೈಕ್ ನಲ್ಲಿ ಮಗನನ್ನು ಶಾಲೆಗೆ ಬಿಡಲು ಕರೆದೊಯ್ಯುತ್ತಿದ್ದರು.
ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಾಲಕ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆಯೇ ಟಿಪ್ಪರ್ ಚಕ್ರ ಹರಿದಿದೆ. ತಾಯಿಯ ಕಣ್ಣೆದುರೇ ಐದು ವರ್ಷದ ಮಗ ಕೊನೆಯುಸಿರೆಳೆದಿದ್ದಾನೆ.
ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಉತ್ತರಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




