ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಠ್ಯಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್ ಕುರಿತ ಪಾಠ ತೆಗೆದುಹಾಕಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಸಮಿತಿಯೊಂದನ್ನು ರಚಿಸಿದ್ದು, ಟಿಪ್ಪು ಕುರಿತ ವೈಭವೀಕರಣಕ್ಕೆ ಕತ್ತರಿ ಹಾಕಲು ಸಮಿತಿ ಮುಂದಾಗಿದೆ.
ಶಾಲಾ ಪಠ್ಯಪುಸ್ತಕಗಳಲ್ಲಿ ಮೈಸೂರು ಹುಲಿ ಎಂದು ಟಿಪ್ಪು ಸುಲ್ತಾನ್ ಬಗ್ಗೆ ಉಲ್ಲೇಖವಿದೆ. ಆದರೆ ಈ ಬಿರುದು ಕೊಟ್ಟಿದ್ದು ಯಾರು? ಯಾವ ಸಂದರ್ಭದಲ್ಲಿ? ಎಂಬ ಬಗ್ಗೆ ಎಲ್ಲಿಯೂ ಉಲ್ಲೇಖವಿಲ್ಲ.
ಈ ಹಿನ್ನೆಲೆಯಲ್ಲಿ ಮೈಸೂರು ಹುಲಿ ಬಿರುದನ್ನು ಕೈಬಿಡಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಿಳಿಸಿದ್ದಾರೆ. ಅದರ ಜತೆಗೆ ಇನ್ನೂ ಹಲವು ಅಂಶಗಳನ್ನು ಒಳಗೊಂಡ ವರದಿಯನ್ನು ಸಮಿತಿ ರಾಜ್ಯ ಸರ್ಕಾರಕ್ಕೆ ನೀಡಿದ್ದು, ಪರಿಶೀಲನೆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ಅಪರೂಪದ ಮದುವೆ ಆತ್ಮಹತ್ಯೆಯಲ್ಲಿ ಅಂತ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ