Politics

*ಮೇ 15 ರಂದು ತಿರಂಗಾ ಯಾತ್ರೆ: ಆರ್. ಅಶೋಕ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಕ್ಷಣೆಗಾಗಿ ನಾಗರಿಕರ ಹೆಸರಿನಲ್ಲಿ ದೇಶಾದ್ಯಂತ ಯಾವುದೇ ಪಕ್ಷಭೇದವಿಲ್ಲದೆ ತಿರಂಗಾ ಯಾತ್ರೆ ಮಾಡಬೇಕೆಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಮೇ 15 ರಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮಾಡಲು ನಿರ್ಧರಿಸಿದ್ದಾಗಿ ವಿಧಾನಸಭೆ ವಿಪಕ್ಷ ನಾಯಕ ಆ‌ರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೇನಾಪಡೆಗಳ ಜೊತೆ ನಿಂತು ಬಲ ತುಂಬುವುದು ತಿರಂಗಾ ಯಾತ್ರೆಯ ಉದ್ದೇಶವಾಗಿದೆ. ಹೀಗಾಗಿ, ರಾಜ್ಯದಲ್ಲಿ ಕೂಡ ದೊಡ್ಡಮಟ್ಟದಲ್ಲಿ ತಿರಂಗಾ ಯಾತ್ರೆ ಮಾಡುತ್ತಿದ್ದೇವೆ. ಮೇ 15ರಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮಾಡುತ್ತೇವೆ ಎಂದರು.

ಮಲ್ಲೇಶ್ವರಂನ ಶಿರೂರು ಪಾರ್ಕ್‌ನಿಂದ 18ನೇ ಕ್ರಾಸ್‌ವರೆಗೆ ತಿರಂಗಾ ಯಾತ್ರೆ ಮಾಡುತ್ತೇವೆ. ಮೇ 16, 17ರಂದು ಜಿಲ್ಲಾ ಕೇಂದ್ರಗಳಲ್ಲಿ ತಿರಂಗಾ ಯಾತ್ರೆ ನಡೆಯಲಿದೆ. ಮೇ 18ರಿಂದ 23ರವರೆಗೆ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದರು.

ತಿರಂಗಾ ಯಾತ್ರೆಯಲ್ಲಿ ಯಾವುದೇ ಪಕ್ಷದ ಧ್ವಜ ಬಳಕೆ ಮಾಡಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇವೆ. ಯಾತ್ರೆಯಲ್ಲಿ ವಿದ್ಯಾರ್ಥಿಗಳು, ಎಂಜಿನಿಯರ್‌ಗಳು, ವೈದ್ಯರು, ಕಾರ್ಮಿಕರು ಎಲ್ಲರೂ ಭಾಗಿಯಾಗಬಹುದು. ಆದರೆ ರಾಷ್ಟ್ರಧ್ವಜವನ್ನು ಹೊರತುಪಡಿಸಿ ಯಾವುದೇ ಪಕ್ಷದ ಧ್ವಜಗಳ ಬಳಕೆ ಮಾಡುವಂತಿಲ್ಲ ಎಂದು ತಿಳಿಸಿದರು.

ದೇಶದಲ್ಲಿ ನಾವೆಲ್ಲರೂ ಒಟ್ಟಾಗಿದ್ದೇವೆ, ಈ ಸಂದರ್ಭದಲ್ಲಿ ಸೈನಿಕರೊಂದಿಗೆ ನಾವು ನಿಂತಿದೇವೆ ಎಂದು ನಾವು ತೋರಿಸಿಕೊಡುವುದು ಅಗತ್ಯ ಹೀಗಾಗಿ ತಿರಂಗಾ ಯಾತ್ರೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button