ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ತಿರುಮಲ ನಾಯ್ಕ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಬಿಎಎಲ್ ಎಲ್ ಬಿ ಪ್ರಥಮ ವರ್ಷದ ವಿದ್ಯಾರ್ಥಿ ತಿರುಮಲ ನಾಯ್ಕ ರಾಜ್ಯಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ವಿಕಾಸಸೌಧದಲ್ಲಿ ಮಂತ್ರ ಫೌಂಡೇಶನ್ ಹಾಗೂ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ ನಾಗರಿಕ ಯುವ ಸಂಸತ್ತು ಎಂಬ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಅವರು ತೃತೀಯ ಸ್ಥಾನ ಪಡೆದು ಬೆಲ್ಲದ ಕಾನೂನು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ತಮ್ಮ ಅತ್ಯುತ್ತಮ ವಾಕ್ಚಾತುರ್ಯದ ಮೂಲಕ ಅವರು ಸಭಿಕರ ಮನೆಗೆದ್ದಿದ್ದರು.
ಸುಮಾರು 210 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.
ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ತಿರುಮಲ ಅವರನ್ನು ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯ ಡಾ.ಬಿ.ಜಯಸಿಂಹ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ