National

*ತಿರುಪತಿ ಲಡ್ಡು ವಿವಾಧ: ಸ್ವತಂತ್ರ SIT ರಚಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣಕ್ಕೆ ಸಬಂಧಿಸಿದಂತೆ ತನಿಖೆಗೆ ಪ್ರತ್ಯೇಕ ಎಸ್ಐಟಿ ರಚನೆ ಮಾಡುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.

ಸಿಬಿಐ, ರಾಜ್ಯ ಪೊಲೀಸರು ಹಾಗೂ ಎಫ್ ಎ ಎಸ್ ಎ ಐ ಅಧಿಕಾರಿಗಳನ್ನು ಒಳಗೊಂಡ ಹೊಸ ಐದು ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ತಿರುಪತಿ ಲಡ್ಡು ಪ್ರಸಾದ ಕೋಟ್ಯಂತರ ಜನರ ನಂಬಿಕೆಯ ಪ್ರಶ್ನೆ. ಹೀಗಿರುವಾಗ ಇದೊಂದು ರಾಜಕೀಯ ನಾಟಕವಾಗಬಾರದು. ಸ್ವತಂತ್ರ ಸಂಸ್ಥೆಯಿದ್ದರೆ ಆತ್ಮವಿಶ್ವಾಸ ಮೂಡುತ್ತದೆ. ಈ ನಿಟ್ಟಿನಲ್ಲಿ ಸ್ವತಂತ್ರ ಎಸ್ಐಟಿ ರಚಿಸಿ ತನಿಖೆ ನಡೆಸುವಂತೆ ಸೂಚಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button