
ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಮಾದ ಹಿನ್ನೆಲೆ
ಪ್ರಗತಿವಾಹಿನಿ ಸುದ್ದಿ: ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಹಿಂದುಇನ ಸರ್ಕಾರದ ಆದ ಪ್ರಮಾದಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಪ್ರಾಯಶ್ಚಿತ ದೀಕ್ಷೆ ಕೈಗೊಂಡಿದ್ದಾರೆ.
ಹಿಂದಿನ ಜಗನ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಲ್ಯಾಬ್ ಟೆಸ್ ನಲ್ಲಿಯೂ ದೃಢಪಟ್ಟಿದೆ ಎಂದು ವರದಿಯಾಗಿದೆ. ಈ ಘಟನೆ ವೆಂಕಟೇಶ್ವರ ಸ್ವಾಮಿ ಭಕ್ತರಲ್ಲಿ ಆಘಾತವನ್ನುಂಟುಮಾಡಿದೆ. ಭಗವಂತನ ಪ್ರಸಾದ ತಯಾರಿಕೆಯಲ್ಲಿ ಅಪಚಾರವಾದ ಕಾರಣಕ್ಕೆ ಆಂಧ್ರ ಡಿಸಿಎಂ ಇಂದಿನಿಂದ ಪ್ರಾಯಶ್ಚಿತ ದೀಕ್ಷೆ ಕೈಗೊಂಡಿದ್ದಾರೆ.
ಆಂಧ್ರದ ಗುಂಟೂರು ಜಿಲ್ಲೆಯ ನಂಬೂರಿನ ದಶಾವತಾರ ವೆಂಕಟೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ದೀಕ್ಷೆ ಕೈಗೊಂಡಿದ್ದು, ಇಂದಿನಿಂದ 11 ದಿನಗಳ ಕಾಲ ಪ್ರಾಯಶ್ಚಿತ ದೀಕ್ಷೆ ಕೈಗೊಂಡಿದ್ದಾರೆ. ದೀಕ್ಷೆ ಬಳಿಕ ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿ ಸನ್ನಿಧಾನದಲ್ಲಿ ದೀಕ್ಷೆ ಸಮಾಪ್ತಿಗೊಳಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ