ತಿಮ್ಮಪ್ಪನ ದರ್ಶನಕ್ಕೂ ಮತ್ತೆ ತಗುಲಿದ ಕೊರೊನಾ ಬಿಸಿ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ತಿನಲ್ಲಿ 21 ದಿನಗಳ ಲಾಕ್ ಡೌನ್ ಅವಧಿಯನ್ನು ಮೇ 3ರವರೆಗೂ ವಿಸ್ತರಿಸಲಾಗಿದ್ದು, ಈ ಹಿನ್ನಲೆಯಲ್ಲಿ ವಿಶ್ವ ಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನದಲ್ಲಿ ತಿಮ್ಮಪ್ಪನ ದರ್ಶನ ಬಂದ್​ ಅವಧಿಯನ್ನು ಮೇ 3ರವರೆಗೂ ವಿಸ್ತರಿಸಿ ಟಿಟಿಡಿ ಆಡಳಿತ ಮಂಡಳಿ ಸುತ್ತೋಲೆ ಹೊರಡಿಸಿದೆ.

ತಿರುಪತಿಗೆ ಮಾರ್ಚ್​​ 19ರಂದು ಆಗಮಿಸಿದ ಕೊರೋನಾ ಶಂಕಿತ ವ್ಯಕ್ತಿಯೋರ್ವ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪರಿಣಾಮ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಶಂಕಿತ ವ್ಯಕ್ತಿಯೋರ್ವ ದೇವಸ್ಥಾನದ ಬಳಿ ಕುಸಿದು ಬಿದ್ದಿದ್ದರು. ಕೂಡಲೇ ಆತನನ್ನು ತಿರುಪತಿಯ ಎಸ್​​ವಿಐಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಗೆಯೇ ಶಂಕಿತ ವ್ಯಕ್ತಿಯೊಂದಿಗಿದ್ದ ಸಂಬಂಧಿಕರಿಗೂ ಪ್ರತ್ಯೇಕವಾಗಿ ಇರಿಸಿ ನಿಗಾವಹಿಸಲಾಗಿತ್ತು. ಇದಾದ ನಂತರ ತಿರುಮಲ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿ ತಿಮ್ಮಪ್ಪನ ದರ್ಶನ ಬಂದ್ ಮಾಡಿತ್ತು.

ಅಲ್ಲದೇ ಆಂಧ್ರ ಸಿಎಂ ಜಗನ್​​ ಮೋಹನ್ ರೆಡ್ದಿ ಸರ್ಕಾರ ತಿರುಪತಿ ಸೇರಿದಂತೆ ಆಂಧ್ರಪ್ರದೇಶದ ಪ್ರಮುಖ ದೇವಾಲಯ, ಮಸೀದಿ ಮತ್ತು ಚರ್ಚ್​​ಗಳನ್ನು ಲಾಕ್​ಡೌನ್​​ ಮುಗಿಯುವವರೆಗೂ ಮುಚ್ಚಿ ಆದೇಶಿಸಿದೆ. ಮುಂಜಾಗ್ರತಾ ಕ್ರಮವಾಗಿ ತಿರುಮಲ ದೇಗುಲವನ್ನು ಬಂದ್​ ಮಾಡಲಾಗಿದ್ದು, ಅರ್ಚಕರು ಹೊರತುಪಡಿಸಿ ಇನ್ಯಾರಿಗೂ ಪ್ರವೇಶವಿಲ್ಲ ಎಂದು ಆದೇಶ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button