ಪ್ರಗತಿವಾಹಿನಿ ಸುದ್ದಿ: ತಿರುಪತಿ ತಿರುಮಲದಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ತಿರುಪತಿ ತಿರುಮಲದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಲಡ್ಡು ವಿತರಣಾ ಕೌಂಟರ್ 47ರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಟಿಟಿಡಿ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಟಿಟಿಡಿ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಜ.8ರಂದು ತಿರುಪತಿಯಲ್ಲಿ ಕಲತುಳಿತ ಸಂಭವಿಸಿ 6 ಭಕ್ತರು ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೇ ಈಗ ಬೆಂಕಿ ಅವಘಡ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ