Kannada NewsLatestNational

*ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲೂನಿ ರಿಚ್ಛಾ (LNR) ಮತ್ತು ವಿಕ್ರಮ್‌ಗಢ್ ಅಲೋಟ್ (VMA) ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Home add -Advt

ಇಂದು ಬೆಳಿಗ್ಗೆ 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್‌ಗೆ ತೆರಳುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ರೈಲ್ವೆ ಸಿಬ್ಬಂದಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಬೆಂಕಿ ತಗುಲಿದ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಿದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಿಲ್ಲ.


Related Articles

Back to top button