National

*ರಣಮಳೆಗೆ ಭೀಕರ ಭೂಕುಸಿತ: ಅವಶೇಷಗಳಡಿ 7 ಜನ ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ಫೆಂಗಲ್ ಚಂಡಮಾರುತ ತಮಿಳುನಾಡು, ಪುದುಚೆರಿಗಳಲ್ಲಿ ಅನಾಹುತಗಳ ಮೇಲೆ ಅನಾಹುತ ಸೃಷ್ಟಿಸುತ್ತಿದೆ. ಭಾರಿ ಮಳೆಯಿಂದಾಗಿ ಎರಡೂ ರಾಜ್ಯಗಳಲ್ಲಿ ಪ್ರವಾಹಸ್ಥಿತಿ ಎದುರಾಗಿದ್ದು, ಜನರ ಬದುಕು ಮೂರಾಬಟ್ಟೆಯಾಗಿದೆ.

ಒಂದೆಡೆ ರಣಮಳೆ, ಇನ್ನೊಂದೆಡೆ ಪ್ರವಾಹ, ಮತ್ತೊಂದೆಡೆ ಭೂಕುಸಿತದಿಂದಾಗಿ ತಮಿಳುನಾಡು ಜನತೆ ತತ್ತರಿಸಿ ಹೋಗಿದ್ದಾರೆ. ಫೆಂಗಲ್ ಚಂಡಮಾರುತ ಈವರೆಗೆ 11ಜನರನ್ನು ಬಲಿಪಡೆದಿದೆ.

ಈ ಮಧ್ಯೆ ತಿರುವಣ್ಣಾಮಲೈನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ.ತಿರುವಣ್ಣಾಮಲೈನ ಅಣ್ಣಾಮಲೈಯಾರ್ ಬೆಟ್ಟದ ತಪ್ಪಲಿನಲ್ಲಿ ವಿ.ಸಿನಗರದಲ್ಲಿ ಭೂಕುಸಿತ ಸಂಭವಿಸಿದ್ದು, 7 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಳೆಯ ನಡುವೆಯೇ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಹಲವೆಡೆ ಪ್ರವಾಹ ಭೀತಿ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

Home add -Advt

Related Articles

Back to top button