ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಶ್ನೆಗಾಗಿ ನಗದು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟನೆ ಮಾಡಲಾಗಿದೆ.
ಸಂಸತ್ ನಲ್ಲಿ ಪ್ರಶ್ನೆ ಕೇಳಲು ಮಹುವಾ ಮೊಯಿತ್ರಾ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ನಿಟ್ಟಿನಲ್ಲಿ ನೈತಿಕ ಸಮಿತಿ ಇಂದು ಲೋಕಸಭೆಗೆ ವರದಿ ಸಲ್ಲಿಸಿತ್ತು. ಈ ವರದಿ ಆಧರಿಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟಿಸುವ ನಿರ್ಣಯ ಅಂಗೀಕರಿಸಲಾಯಿತು.
ಸಂಸದೆ ಮಹುವಾ ಮೊಯಿತ್ರಾ ಅವರನ್ನು ಉಚ್ಛಾಟಿಸಿದ ಕ್ರಮಕ್ಕೆ ವಿಪಕ್ಷ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭಾ ಕಲಾಪವನ್ನು ಬಹಿಷ್ಕರಿಸಿ ಹೊರ ನಡೆದರು.
ಈ ವೇಳೆ ಸಂಸತ್ ಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹುವಾ ಮೊಯಿತ್ರಾ, ನಾನು ಲಂಚ ಪಡೆದ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಸಾಬೀತಾಗಿಲ್ಲ. ನನಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶಕೊಡದೇ ಏಕಪಕ್ಷಿಯವಾಗಿ ನ್ನಿರ್ಣಯ ಕೈಗೊಂಡು ಉಚ್ಛಾಟಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ