ವಿಶೇಷ ವಿಮಾನದಲ್ಲಿ ಬೆಳಗಾವಿಗೆ 12 ಗಂಟೆಗೆ ಉಮೇಶ ಕತ್ತಿ ಪಾರ್ಥಿವ ಶರೀರ ; ವಿಮಾನ ನಿಲ್ದಾಣದಿಂದ ಮೆರವಣಿಗೆಯಲ್ಲಿ ಹುಟ್ಟೂರಿಗೆ; BJP ಜನೋತ್ಸವ ಮುಂದೂಡುವ ಸಾಧ್ಯತೆ
ಉಮೇಶ ಕತ್ತಿ ನಿಧನದ ಹಿನ್ನೆಲೆಯಲ್ಲಿ ಸೆಪ್ಟಂಬರ್ 8ರಂದು ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸರಕಾರದ ಜನೋತ್ಸವ ಕಾರ್ಯಕ್ರಮ ರದ್ದಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನಿನ್ನೆ ರಾತ್ರಿ ನಿಧನರಾಗಿರುವ ಸಚಿವ ಉಮೇಶ ಕತ್ತಿ ಪಾರ್ಥಿವ ಶರೀರವನ್ನು ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ಬೆಳಗಾವಿಗೆ ತರುವ ಪ್ರಯತ್ನ ಮಾಡಲಾಯಿತಾದರೂ ಹವಾಮಾನ ವೈಪರೀತ್ಯದಿಂದ ಸಾಧ್ಯವಾಗುತ್ತಿಲ್ಲ.
ಹಾಗಾಗಿ ಹೈದರಾಬಾದ್ ನಿಂದ ವಿಶೇಷ ವಿಮಾನ ತರಿಸಲಾಗುತ್ತಿದ್ದು ಅದು ಬಂದ ನಂತರ ಬೆಂಗಳೂರಿನಿಂದ ಮೃತದೇಹ ಬೆಳಗಾವಿಯತ್ತ ಹೊರಡಲಿದೆ.
10.30 ಗಂಟೆ ಹೊತ್ತಿಗೆ ವಿಮಾನ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. 12 ಗಂಟೆ ಹೊತ್ತಿಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಬರುವ ಸಾಧ್ಯತೆ ಇದೆ.
ಬೆಳಗಾವಿ ವಿಮಾನ ನಿಲ್ದಾಣದಿಂದ ಬೆಲ್ಲದ ಬಾಗೇವಾಡಿಗೆ ವಿಶೇಷ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಶರೀರ ಕೊಂಡೊಯ್ಯಲಾಗುವುದು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಹಲವಾರು ಸಚಿವರು, ಶಾಸಕರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸೇರಿದಂತೆ ಹಲವು ಗಣ್ಯರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಲಿದ್ದಾರೆ.
ಸಂಜೆ 5 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ.
ಉಮೇಶ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಲ್ಲದ ಬಾಗೇವಾಡಿ ಸಂಪೂರ್ಣ ಬಂದ್ ಆಚರಿಸುತ್ತಿದೆ. ಯಾವುದೇ ಅಂಗಡಿ, ಮುಂಗಟ್ಟು ತೆರೆದಿಲ್ಲ.
ಉಮೇಶ ಕತ್ತಿ ನಿಧನದ ಹಿನ್ನೆಲೆಯಲ್ಲಿ ಸೆಪ್ಟಂಬರ್ 8ರಂದು ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸರಕಾರದ ಜನೋತ್ಸವ ಕಾರ್ಯಕ್ರಮ ರದ್ದಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಬುಧವಾರ ಸಂಜೆ 5 ಗಂಟೆಗೆ ಉಮೇಶ ಕತ್ತಿ ಅಂತ್ಯ ಸಂಸ್ಕಾರ – CM ಬೊಮ್ಮಾಯಿ
https://pragati.taskdun.com/latest/umesh-katthi-funeral-at-5-pm-on-wednesday-cm-bommai/
ಉಮೇಶ ಕತ್ತಿ ನಿಧನ: ಬೆಳಗಾವಿ ಜಿಲ್ಲೆಯಾದ್ಯಂತ ಬುಧವಾರ ಸರಕಾರಿ ಕಚೇರಿ, ಶಾಲೆ, ಕಾಲೇಜುಗಳಿಗೆ ರಜೆ
https://pragati.taskdun.com/belgaum-news/death-of-umesh-katti-holiday-for-government-offices-schools-and-colleges-across-belgaum-district-on-wednesday/
https://pragati.taskdun.com/latest/minister-umesh-katthi-passed-away/
ಚುನಾವಣೆಗೆ ನಿಲ್ಲಲೆಂದು ಹೊಸ ಪ್ಯಾಂಟ್ ಹೊಲಿಸಿದ್ದ ಉಮೇಶ ಕತ್ತಿ! ; ನನಸಾಗಲೇ ಇಲ್ಲ 2 ರಾಜ್ಯದ ಕನಸು
https://pragati.taskdun.com/latest/umesh-katthi-weared-pants-for-the-first-time-to-stand-for-election-never-realized-the-dream-of-2-states/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ