
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಶೌಚಾಲಯದ ಕಟ್ಟಡ ಕುಸಿದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ತಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.
ಶೌಚಾಲಯ ಕಟ್ಟಡ ಕುಸಿದು ಬಿದ್ದು ಬಾನು ಬೇಗಂ (40) ಎಂಬುವವರು ನಿನ್ನೆ ಮೃತಪಟ್ಟಿದ್ದರು. ಕಟ್ಟಡದ ಅವಶೇಷಗಳ ಅಡಿ ಸಿಲುಕಿ ಗಾಯಗೊಂಡಿದ್ದ ಉಮಾಬಾಯಿ (35) ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೇ ಮಹಿಳೆ ಉಮಾಬಾಯಿ ಇಂದು ಕೊನೆಯುಸಿರೆಳೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ