ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಪ್ರದೇಶದಲ್ಲಿ ಮನೆ-ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವುದರ ಜೊತೆಗೆ ಅದರ ಬಳಕೆಯು ಕಡ್ಡಾಯವಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹೇಳಿದರು.
ತಾಲ್ಲೂಕಿನ ಬಸ್ತವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೊಂಡಸಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ (ನವೆಂಬರ್. 19) ರಂದು ಗ್ರಾಮ ಪಂಚಾಯತಿ ಬಸ್ತವಾಡ, ತಾಲ್ಲೂಕ ಪಂಚಾಯತ ಬೆಳಗಾವಿ ಹಾಗೂ ಜಿಲ್ಲಾ ಪಂಚಾಯತ ಬೆಳಗಾವಿ ವತಿಯಿಂದ ಆಯೋಜಿಸಿದ್ದ ವಿಶ್ವ ಶೌಚಾಲಯ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ವಿದೇಶಕ್ಕೆ ಹೋಲಿಸಿದರೆ ನಮ್ಮ ದೇಶದಲ್ಲಿ ಶೌಚಾಲಯ ಕಟ್ಟಿಸಿದ್ದರು ಬಳೆಕೆಯು ಕಡಿಮೆ ಪ್ರಮಾದಲ್ಲಿ ಇದೆ. ಸಮಾಜದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯದ ಬಳೆಕೆ ಪ್ರಮಾಣ ಹೆಚ್ಚಾಗಬೇಕಿದೆ ಎಂದು ಹೇಳಿದರು.
ಇದಕ್ಕೂ ಮೊದಲು ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾಹಿತಿಯನ್ನು ಪಡೆದುಕೊಂಡರು. ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಎನ್ ಬಂಗಾರೆಪ್ಪನವರ, ಗ್ರಾಪಂ ಅಧ್ಯಕ್ಷರಾದ ಶ್ರೀದೇವಿ ಮಹಾದೇವಿ ಬಾಳಾರಾಮ ಪಾಟೀಲ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಮೇಶ ಹೆಡಗೆ, ಸಹಾಯಕ ನಿರ್ದೇಶಕರಾದ (ಗ್ರಾ.ಉ) ಬಿ.ಡಿ ಕಡೇಮನಿ, ಬೆಳಗಾವಿ ವಿಭಾಗ ಕಾರ್ಯಪಾಲಕ ಅಭಿಯಂತರರು (ಪಂರಾ) ಶಶೀಕಾಂತ ನಾಯಕ. ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಎಸ್. ಮೋದಾರ ಪಿಡಿಒ ಶ್ವೇತಾ ಡಿ.ಆರ್ ಸೇರಿದಂತೆ ಇತರರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ