
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಟೋಕಿಯೋ ಒಲಂಪಿಕ್ಸ್ ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ ತರಬೇತುದಾರ ಕಾಶಿನಾಥ್ ನಾಯ್ಕ್ ಗೆ ಕ್ರೀಡಾ ಸಚಿವ ನಾರಾಯಣಗೌಡ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.
ಟೋಕಿಯೋ ಒಲಂಪಿಕ್ಸ್ ಕ್ರಿಡಾಕೂಟದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದರಿರುವ ನೀರಜ್ ಗೆ ಅಭಿನಂದನೆಗಳು. ನೀರಜ್ ಸಾಧನೆ ಹಿಂದೆ ಕನ್ನಡಿಗ ತರಬೇತುದಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ್ ಪಾತ್ರ ಮಹತ್ವದ್ದಾಗಿದೆ. 2010ರ ಕಾಮನ್ವೆಲ್ತ್ ನಲ್ಲಿ ಈಟಿ ಎಸೆತದಲ್ಲಿ ಕಾಶಿನಾಥ್ ಕಂಚಿನ ಪದಕ ವಿಜೇತರಾಗಿದ್ದರು.
ಉತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಸ್ವರ್ಣ ಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಇಂತಹ ಸಾಧನೆಗೆ ಬೆನ್ನೆಲುಬಾದ ಕನ್ನಡಿಗ ಕಾಶಿನಾಥ್ ನಾಯ್ಕ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೊಮ್ಮಾಯಿ ಆಫರ್ ತಿರಸ್ಕರಿಸಿದ ಯಡಿಯೂರಪ್ಪ; ಸ್ವಾಗತಿಸಿದ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ