Kannada NewsKarnataka NewsNational

ದೇಶದಾದ್ಯಂತ ಟೋಲ್ ದರ ಏರಿಕೆ

ಪ್ರಗತಿವಾಹಿನಿ ಸುದ್ದಿ: ದಿನದಿಂದ ದಿನಕ್ಕೆ ಬೆಲೆ ಏರಿಕೆಯ ಸಮಸ್ಯೆ ಎದುರಿಸುತ್ತಿರುವ ಜನರಿಗೆ ಮತ್ತೊದು ಶಾಕ್ ಎದುರಾಗಿದೆ. ಇಂದಿನಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ ಶೇ.3ರಿಂದ 5ರಷ್ಟು ಹೆಚ್ಚಳವಾಗಲಿದೆ. 

ದೇಶದಲ್ಲಿ ಕಳೆದ ದಶಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಣೆ ಮತ್ತು ಅಭಿವೃದ್ಧಿಗೆ ಶತಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡಲಾಗಿದೆ. ಸುಮಾರು 1,46,000 ಕಿಲೋಮೀಟರ್‌ಗಳಷ್ಟು ಹೆದ್ದಾರಿ ನಿರ್ಮಿಸಲಾಗಿದೆ. 2022- 23 ಹಣಕಾಸು ವರ್ಷದಲ್ಲಿ 540 ಶತಕೋಟಿ ರೂಪಾಯಿಗಳಿಗೆ ಟೋಲ್ ಸಂಗ್ರಹಣೆ ಹೆಚ್ಚಿದೆ.

ಲೋಕಸಭಾ ಚುನಾವಣೆ ಹಿನ್ನಲೆ ಟೋಲ್ ದರ ಏರಿಕೆಯನ್ನು ತಡೆ ಹಿಡಿದಿದ್ದ ಹೆದ್ದಾರಿ ಪ್ರಾಧಿಕಾರಿ, ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಮತ್ತೆ ದರವನ್ನು ಏರಿಕೆ ಮಾಡಿದೆ. ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ 3% ರಿಂದ 5% ರಷ್ಟು ಹೆಚ್ಚಳ ಆಗಲಿದೆ. ಟೋಲ್ ದರ ಏರಿಕೆಯಿಂದಾಗಿ ಪ್ರಯಾಣಿಕರಿಗೂ ಹೆಚ್ಚಿನ ಹೊರೆ ಬೀಳಲಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button