ಪ್ರಗತಿವಾಹಿನಿ ಸುದ್ದಿ: ಪುಷ್ಪ-2 ಸಿನಿಮಾ ಬಿಡಿಗಡೆ ಸಂದರ್ಭದಲ್ಲಿ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆ ಸಾವನ್ನಪ್ಪಿದ ಪ್ರಕರಣ ಸಂಬಂಧ ಟಾಲಿವುಡ್ ನಟ ಅಲ್ಲು ಅರ್ಜುನ್ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ.
ಇದೇ ಪ್ರಕರಣದಲ್ಲಿ ಕೆಲ ದಿನಗಲ ಹಿಂದೆ ಬಂಧನಕ್ಕೀಡಾಗಿದ್ದ ನಟ ಅಲ್ಲು ಅರ್ಜುನ್, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಪೊಲಿಸರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಹೈದರಾಬಾದ್ ನ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ಅಲ್ಲು ಅರ್ಜುನ್ ಹೇಳಿಕೆ ಪಡೆದು, ದಾಖಲಿಸಿಕೊಳ್ಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ