Film & EntertainmentKannada NewsLatest
*ಖ್ಯಾತ ನಟ ಚಂದ್ರಮೋಹನ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಟಾಲಿವುಡ್ ಖ್ಯಾತ ನಟ ಚಂದ್ರಮೋಹನ್ ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಕೆಲ ತಿಂಗಳುಗಳಿಂದ ಚಂದ್ರಮೋಹನ್ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಮೋಹನ್ ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
1966ರಿಂದ ಚಂದ್ರಮೋಹನ್ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. 900ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಆಕ್ಸಿಜನ್ ಅವರು ನಟಿಸಿದ ಕೊನೇ ಸಿನಿಮಾ. ಹಿರಿಯ ನಟನ ಅಗಲಿಕೆಗೆ ಟಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ. ನವೆಂಬರ್ 13ರಂದು ಚಂದ್ರಮೋಹನ್ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.




