Latest

ಭೀಕರ ರಸ್ತೆ ಅಪಘಾತಕ್ಕೀಡಾದ ಮತ್ತೋರ್ವ ನಟ; ಪ್ರಜ್ಞಾಹೀತ ಸ್ಥಿತಿಯಲ್ಲಿ ಸಾಯಿ ಧರಮ ತೇಜ್

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಟಾಲಿವುಡ್ ನಟ ಸಾಯಿ ಧರಮ್ ತೇಜ್ ಬೈಕ್ ಅಪಘಾತಕ್ಕೀಡಾಗಿದ್ದು, ಪ್ರಜ್ಞಾಹೀನ ಸ್ಥಿತಿ ತಲುಪಿರುವ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡರಾತ್ರಿ ಸ್ಫೋರ್ಟ್ಸ್ ಬೈಕ್ ನಲ್ಲಿ ತೆರಳಿದ್ದ ಸಾಯಿ ಧರಮ್ ತೇಜ್ ಹೈದರಾಬಾದ್ ನ ದುರ್ಗಮ್ ಚೆರುವು ಕೇಬಲ್ ಬ್ರಿಡ್ಜ್ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತಕ್ಕೀಡಾಗಿದ್ದಾರೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ, ಹೊಟ್ಟೆ, ಬಲಗಣ್ಣಿನ ಭಾಗಕ್ಕೆ ತೀವ್ರವಾದ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಈ ನಡುವೆ ಸಾಯಿ ಧರಮ್ ತೇಜ್ ದಾಖಲಾಗಿರುವ ಆಸ್ಪತ್ರೆಗೆ ನಟ ಚಿರಂಜೀವಿ, ಪವನ್ ಕಲ್ಯಾಣ್, ಪ್ರಕಾಶ್ ರೈ ಸೇರಿದಂತೆ ಟಾಲಿವುಡ್ ಗಣ್ಯರು ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.

Home add -Advt

ನಟನ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪವನ್ ಕಲ್ಯಾಣ್, ಸಾಯಿ ಧರಮ್ ತೇಜ್ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದೇನೆ. ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೂ ಹೆದರುವಂಥದ್ದೇನಿಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಗುಣಮುಖರಾಗುತ್ತಾರೆ ಎಂದು ಹೇಳಿದ್ದಾರೆ ಎಂದಿದ್ದಾರೆ.
ಅಧಿವೇಶನಕ್ಕೆ ಹಾಜರಾಗುತ್ತಾರಾ ಜಾರಕಿಹೊಳಿ ಸಹೋದರರು?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button