Film & EntertainmentKannada NewsLatest

*ಮದುವೆ ಆಸೆ ಹುಟ್ಟಿಸಿ ಕೈಕೊಟ್ಟ ಖ್ಯಾತ ನಟಿ; ಅನಿವಾಸಿ ಭಾರತೀಯ ಯುವಕನಿಗೆ 9.35 ಕೋಟಿ ವಂಚನೆ: ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಖ್ಯಾತ ತೆಲುಗು ನಟಿ, ಬಿಗ್ ಬಾಸ್ ತೆಲುಗು ಮಾಜಿ ಸ್ಪರ್ಧಿ ಆಶು ರೆಡ್ಡಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮದುವೆಯ ಭರವಸೆ ನೀಡಿ ವಿವಿಧ ಕಾರಣಕ್ಕಾಗಿ ಬರೋಬ್ಬರಿ 9.35 ಕೋಟಿ ರೂಪಾಯಿ ಹಣ ಪಡೆದು ಯುವಕನಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.

ಅನಿವಾಸಿ ಭಾರತೀಯ ಯುವಕನೋರ್ವ ಆಶು ರೆಡ್ಡಿ ವಿರುದ್ಧ ಬರೋಬ್ಬರಿ 9.35 ಕೋಟಿ ರೂಪಾಯಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಆಶು ರೆಡ್ಡಿ ಸಹೋದರಿ ಕೂಡ ತನ್ನಿಂದ 50 ಲಕ್ಷ ಹಣ ಪಡೆದಿದ್ದರು ಎಂದು ದೂರು ನೀಡಿದ್ದಾರೆ.

ಹೈದರಾಬಾದ್‌ನ ಸೆಂಟ್ರಲ್ ಕ್ರೈಮ್ ಸ್ಟೇಷನ್ ನಲ್ಲಿ ಆಶು ರೆಡ್ಡಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹೈದರಾಬಾದ್‌ನ ಶೇಕ್‌ಪೇಟ್ ನಿವಾಸಿ ಸತ್ಯನಾರಾಯಣ ಎಂಬುವವರು ಈ ದೂರು ನೀಡಿದ್ದಾರೆ. ಸತ್ಯನಾರಾಯಣ ಅವರ ಮಗ ಧರ್ಮೇಂದ್ರ ಲಂಡನ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, 2018ರಲ್ಲಿ ಹೈದರಾಬಾದ್‌ನಲ್ಲಿ ಧರ್ಮೇಂದ್ರ ಹಾಗೂ ಆಶು ರೆಡ್ಡಿ ನಡುವೆ ಪರಿಚಯವಾಗಿತ್ತು. ಈ ಸ್ನೇಹ ಮುಂದೆ ಪ್ರೇಮಕ್ಕೆ ತಿರುಗಿ, ಆಶು ರೆಡ್ಡಿ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. 2018 ರಿಂದ 2025 ರ ಅವಧಿಯಲ್ಲಿ ಆಶು ರೆಡ್ಡಿ ವಿವಿಧ ಕಾರಣಗಳನ್ನು ನೀಡಿ ಧರ್ಮೇಂದ್ರ ಅವರಿಂದ ಸುಮಾರು 9.35 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ.

ಈ ಹಣದಲ್ಲಿ ಐಷಾರಾಮಿ ಕಾರುಗಳು, ಸುಮಾರು 5 ಕೆಜಿ ಚಿನ್ನ ಮತ್ತು ಹೈದರಾಬಾದ್‌ನ ಲಾಂಕೋ ಹಿಲ್ಸ್‌ನಂತಹ ಪ್ರದೇಶಗಳಲ್ಲಿ ಫ್ಲ್ಯಾಟ್‌ಗಳನ್ನು ಖರೀದಿಸಲಾಗಿದ್ದು, ಇವೆಲ್ಲವನ್ನೂ ಆಶು ರೆಡ್ಡಿ ಅವರ ಹೆಸರಿನಲ್ಲೇ ನೋಂದಣಿ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಆಶು ರೆಡ್ಡಿ ಅವರ ಸಹೋದರಿ ಕೂಡ 50 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದು ಅದನ್ನೂ ಸಹ ಹಿಂತಿರುಗಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Home add -Advt

ಈ ಹಿಂದೆ ನಟಿ ಆಶು ರೆಡ್ಡಿ ಮದುವೆಗೆ ನಿರಾಕರಿಸಿದಾಗ, ನಟಿ ಹೇಮಾ ಅವರ ಸಮ್ಮುಖದಲ್ಲಿ ಸಂಧಾನ ನಡೆದಿತ್ತು. ಆಗ 70 ಲಕ್ಷ ರೂಪಾಯಿ ಮರಳಿಸುವುದಾಗಿ ಒಪ್ಪಿ ಚೆಕ್ ನೀಡಿದ್ದರು, ನಂತರದಲ್ಲಿ ಆ ಚೆಕ್‌ಗಳನ್ನು ನಾಶಪಡಿಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಎಲ್ಲಾ ಆರೋಪಗಳನ್ನು ಅಲ್ಲಗಳೆದಿರುವ ನಟಿ ಆಶು ರೆಡ್ಡಿ, ನನ್ನ ಅನುಮತಿಯಿಲ್ಲದೆ ನನ್ನ ಬಗ್ಗೆ ಸುಳ್ಳು ಸುದ್ದಿ ಅಥವಾ ಆಧಾರರಹಿತ ಮಾಹಿತಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

Related Articles

Back to top button