ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ಸ್ಟಾರ್ ನಟ-ನಟಿಯರಿಗೂ ಸಂಕಷ್ಟ ಎದುರಾಗಿದ್ದು, ನಟ ರವಿತೇಜಾ ಇಂದು ಜಾರಿನಿರ್ದೇಶನಾಲಯ (ED) ವಿಚಾರಣೆಗೆ ಹಾಜರಾಗಿದ್ದಾರೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಟ ರವಿತೇಜಗೆ ಇಡಿ ನೋಟೀಸ್ ನಿಡಿತ್ತು. ಈ ಹಿನ್ನೆಲೆಯಲ್ಲಿ ಇಂದು ರವಿತೇಜಾ ಇಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದ್ದಾರೆ. ಈ ವೇಳೆ ತಮ್ಮ ಬ್ಯಾಂಕ್ ವ್ಯವಹಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಟಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ರಾಣಾ, ನಿರ್ದೇಶಕ ಪುರಿ ಜಗನ್ನಾಥ್, ನಟಿಯರಾದ ಚಾರ್ಮಿ ಕೌರ್, ರಾಕುಲ್ ಪ್ರೀತ್ ಸಿಂಗ್ ಸೇರಿದಂತೆ ಹಲವು ಸ್ಟಾರ್ ನಟ-ನಟಿಯರು ಇಡಿ ವಿಚಾರಣೆ ಎದುರಿಸಿದ್ದಾರೆ.
‘ನಾ ನಿನ್ನ ಬಿಡಲಾರೆ…’ ಖ್ಯಾತಿಯ ಹಿರಿಯ ನಿರ್ಮಾಪಕ ಸಿ.ಜಯರಾಮ್ ನಿಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ