ಜಾಮೀನು ರಹಿತ ಕೇಸ್ ದಾಖಲು
ಪ್ರಗತಿವಾಹಿನಿ ಸುದ್ದಿ: ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ನಟ ಅಲ್ಲು ಅರ್ಜುನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಕೇಸ್ ದಾಖಲಾಗಿದೆ.
ಹೈದರಾಬಾದ್ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದ ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39)ಎಂಬ ಮಹಿಳೆ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಥಿಯೆಟರ್ ಮಾಲೀಕ ಹಾಗೂ ಇಬ್ಬರು ವ್ಯವಸ್ಥಾಪಕರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರಿಗೆ 5 ಅಥವಾ 10 ವರ್ಷ ಜೈಲು ಶಿಕ್ಷೆಗೂ ಅವಕಾಶವಿದೆ. ಮಗನನ್ನು ಪೊಲೀಸರು ಬಂಧಿಸುತ್ತಿದ್ದಂತೆ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಧಾವಿಸಿದ್ದಾರೆ. ಬಂಧನದ ಬಳಿಕ ಅಲ್ಲು ಅರ್ಜುನ್ ಅವರನ್ನು ತಪಾಸಣೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಚಾರಣೆ ಬಳಿಕ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ