
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಟಾಲಿವುಡ್ ನಟ ರಾಮ್ ಚರಣ್ ತೇಜಾ ತಮ್ಮ ಅಭಿಮಾನಿಯ ಕುಟುಂಬಕ್ಕೆ 10 ಲಕ್ಷ ರೂ. ಚೆಕ್ ನೀಡಿ ಮಾನವೀಯತೆ ಮೆರೆದಿದ್ದಾರೆ.
ಕಳೆದ ಡಿಸೆಂಬರ್ 8ರಂದು ‘ಗ್ರೇಟರ್ ಹೈದರಾಬಾದ್ ಮೆಗಾ ಫ್ಯಾನ್ಸ್ ಅಸೋಸಿಯೇಷನ್’ ಅಧ್ಯಕ್ಷರಾಗಿದ್ದ ನೂರ್ ಅಹಮ್ಮದ್ ಹೃದಯಾಘಾತದಿಂದ ನಿಧನರಾಗಿದ್ದರು. ನೂರ್ ಅಹಮ್ಮದ್ ಅವರು ಚಿರಂಜೀವಿ, ಅಲ್ಲು ಅರ್ಜುನ್ ಹಾಗೂ ರಾಮ್ ಚರಣ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಹಲವು ವರ್ಷಗಳಿಂದ ಮೆಗಾ ಸ್ಟಾರ್ ಕುಟುಂಬವನ್ನು ಬೆಂಬಲಿಸಿದ್ದರು.
ನೂರ್ ಅಹಮ್ಮದ್ ನಿಧನರಾಗಿದ್ದ ವಿಷಯ ತಿಳಿದು ಚಿರಂಜೀವಿ, ರಾಮ್ ಚರಣ್ ಹಾಗೂ ಅಲ್ಲು ಅರ್ಜುನ್ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದರು. ಈ ವೇಳೆ ಅಲ್ಲು ಅರ್ಜುನ್ ಹಾಗೂ ರಾಮ್ ಚರಣ್ ಆರ್ಥಿಕ ಸಹಾಯ ಮಾಡುವುದ್ದಾಗಿ ಹೇಳಿದ್ದರು. ಅಭಿಮಾನಿಯ ಕುಟುಂಬಸ್ಥರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವ ರಾಮ್ ಚರಣ್, 10 ಲಕ್ಷ ರೂ. ಚೆಕ್ ನೀಡಿದ್ದಾರೆ.
ರಾಮ್ ಚರಣ್ ತೇಜಾ ಮಾನವೀಯತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




