ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಜೂನ್ 15ರಿಂದಲೇ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಅನ್ಭುಕುಮಾರ ತಿಳಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಭೇಟಿಯಾದ ಶಿಕ್ಷಕರ ಸಂಘದ ಪದಾಧಿಕಾರಿಗಳೊಂದಿಗೆ ಮಾತನಾಡಿದ ಅವರು, ಶೈಕ್ಷಣಿಕ ವರ್ಷ ಆರಂಭ ಕುರಿತು ಈ ಹಿಂದೆ ಹೊರಡಿಸಿರುವ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.
ನಾಳೆಯಿಂದಲೇ ಶಿಕ್ಷಕರು ಶಾಲೆಗೆ ತೆರಳಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಆರಂಭಿಸಬೇಕು. ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿದಿದೆ. ಅಂತಹ ಜಿಲ್ಲೆಗಳಲ್ಲಿ ಪಾಸ್ ಪಡೆದು ಶಿಕ್ಷಕರು ಶಾಲೆಗೆ ತೆರಳಬೇಕು ಎಂದಿದ್ದಾರೆ.
ಜುಲೈ 1ರಿಂದ ಮಕ್ಕಳಿಗೆ ಪಾಠ ಆರಂಭವಾಗಲಿದೆ. ಶಾಲೆಯಲ್ಲಿ ಪಾಠ ಮಾಡಲು ಸಾಧ್ಯವಾಗದಿದ್ದಲ್ಲಿ ಆನ್ ಲೈನ್ ಪಾಠ ಮಾಡಲಾಗುವುದು. ಈಗಾಗಲೇ ಒಂದು ಶೈಕ್ಷಣಿಕ ವರ್ಷ ವಿಳಂಬವಾಗಿದೆ. ಶಿಕ್ಷಕರು ಅನ್ಯಕಾರಣ ನೀಡುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿಗಳು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಕಾದು ನೋಡಬೇಕು. ಇಂದು ಸಂಜೆಯ ಹೊತ್ತಿಗೆ ಸಚಿವ ಸುರೇಶ ಕುಮಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಸಧ್ಯದ ಪರಿಸ್ಥಿತಿಯಲ್ಲಿ ಶಿಕ್ಷಕರು ಶಾಲೆಗೆ ತೆರಳುವುದು ಎಷ್ಟು ಕಷ್ಟ ಎನ್ನುವುದು ನನ್ನ ಗಮನಕ್ಕಿದೆ. ಬಸ್ ಗಳ ವ್ಯವಸ್ಥೆಯೂ ಇಲ್ಲ. ಕೆಲವು ಜಿಲ್ಲೆಗಳಲ್ಲಿ ಕೊರೆನಾ ನಿಯಂತ್ರಣಕ್ಕೆ ಬಂದಿಲ್ಲ. ಲಾಕ್ ಡೌನ್ ಮುಂದುವರಿದಿದೆ. ಎಲ್ಲವನ್ನೂ ಪರಿಗಣಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸುರೇಶ ಕುಮಾರ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ