Belagavi NewsBelgaum NewsKarnataka NewsPolitics

*ನಾಳೆ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ:  ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ್ ಅವರು ನ.5 ರಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ನ.5 (ಮಂಗಳವಾರ) ರಂದು ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಮುಂಜಾನೆ 10 ಗಂಟೆಗೆ ಬೆಳಗಾವಿಗೆ ಆಗಮಿಸಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೇಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ. ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಭೆ ಜರುಗಿಸುವರು. ಸಂಜೆ 5 ಗಂಟೆಗೆ ಗಾಂಧೀ ಶತಮಾನೋತ್ಸವ ಕುರಿತು ಸಭೆ ಜರುಗಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Home add -Advt

Related Articles

Back to top button