
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮೊದಲ ವರ್ಷದ ಸಮಾರಂಭವು ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್ಫಾರಂ ಮೂಲಕ ಜು.27ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದೆ.
ಈ ಸಮಾರಂಭವು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಭಿತ್ತರವಾಗಲಿದೆ. ಅದೇ ರೀತಿ ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕೂಡ ಭಿತ್ತರಗೊಳ್ಳಲಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಕಳೆದ ಒಂದು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಆಗಬೇಕಾದ ಕೆಲಸಗಳು ಸೇರಿದಂತೆ ಅನೇಕ ವಿಷಯಗಳ ಕುರಿತು ಮಾತನಾಡಲಿದ್ದಾರೆ.
ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಅವರು ಸಂವಾದಕ್ಕೂ ವೇದಿಕೆ ಕಲ್ಪಿಸಲಾಗಿದ್ದು, ನಡೆಸಲಿದ್ದಾರೆ.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್ಫಾರಂ ಮೂಲಕ ಕಾರ್ಯಕ್ರಮದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ವೀಕ್ಷಿಸಲಿದ್ದಾರೆ. ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳು ಮಾತ್ರ ಉಪಸ್ಥಿತರಿರಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ