ಪ್ರಗತಿವಾಹಿನಿ ಸುದ್ದಿ, ಗೋಕಾಕ: 73ನೇ ಗಣರಾಜ್ಯೋತ್ಸವದಲ್ಲಿ ಪ್ರದರ್ಶನಗೊಳ್ಳಬೇಕಿದ್ದ ಮಹಾತ್ಮರ ಸ್ಥಬ್ಧ ಚಿತ್ರಗಳ ಪ್ರದರ್ಶನ ತಿರಸ್ಕರಿಸಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಿವಿಧ ಜನಪರ ಸಂಘಟನೆಗಳು ಹಾಗೂ ಮಾನವ ಬಂಧುತ್ವ ವೇದಿಕೆ ಜ. 27ರಂದು ಬೆಳಗ್ಗೆ 10.30ಕ್ಕೆ ಕೊರ್ಟ್ ಸರ್ಕಲ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಕೇರಳ ರಾಜ್ಯದಿಂದ ಬ್ರಹ್ಮಶ್ರೀ ನಾರಾಯಣಗುರು, ಪಶ್ಚಿಮ ಬಂಗಾಳದಿಂದ ನೇತಾಜಿ ಸುಭಾಶ್ಚಂದ್ರ ಭೋಸ್, ತಮಿಳುನಾಡು ಸರ್ಕಾರದಿಂದ ಸ್ವಾತಂತ್ರ್ಯ ಹೋರಾಟ ಬಿಂಬಿಸುವ ಸ್ಥಬ್ಧ ಚಿತ್ರಗಳನ್ನು ಕಳುಹಿಸಿಕೊಡಲಾಗಿತ್ತು. ಆದರೆ ಗಣರಾಜ್ಯೋತ್ಸವ ಆಯ್ಕೆ ಸಮಿತಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಈ ಸ್ಥಬ್ಧ ಚಿತ್ರಗಳನ್ನು ತಿರಸ್ಕರಿಸಿ, ಮಹಾತ್ಮರಿಗೆ ಅಪಮಾನ ಮಾಡಿದೆ. ಕೇಂದ್ರ ಸರ್ಕಾರದ ಈ ದುಷ್ಟ ನೀತಿ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದು, ತಾವುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್, ವಿಭಾಗೀಯ ಸಂಚಾಲಕ ತೋಳಿ ಭರಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಮೇಶ ಜಾರಕಿಹೊಳಿ ಹೇಳಿದ ಆ ಮೂವರು ಯಾರು? ಅವನೊಬ್ಬ ಯಾರು?: ಎಲ್ಲರ ಕಡೆಗೂ ಅನುಮಾನದ ದೃಷ್ಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ