*ಪಂಜಿನ ಮೆರವಣಿಗೆ: ಲಕ್ಷ್ಮೀ ಹೆಬ್ಬಾಳಕರ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ ಬೆಂಬಲಿಗರು ಪಂಜಿನ ಮೆರವಣಿಗೆ ನಡೆಸಿದರು. ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಅವರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸಿ, ಲಕ್ಷ್ಮೀ ಹೆಬ್ಬಾಳಕರ್ ಪರ ಘೋಷಣೆಗಳನ್ನು ಕೂಗಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯು ಕೆಲಕಾಲ ಗಮನ ಸೆಳೆಯಿತು. ಬಳಿಕ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಹೊತ್ತು ರಸ್ತೆ … Continue reading *ಪಂಜಿನ ಮೆರವಣಿಗೆ: ಲಕ್ಷ್ಮೀ ಹೆಬ್ಬಾಳಕರ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ*