Latest

ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್?; ರಾಜಧಾನಿಯಲ್ಲಿ ಟಫ್ ರೂಲ್ಸ್ ಖಚಿತ ಎಂದ ಆರ್.ಅಶೋಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ 800ಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಮತೆ ಟಫ್ ರೂಲ್ಸ್ ಜಾರಿ ಮಾಡುವುದಾಗಿ ತಿಳಿಸಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ 3ನೇ ಅಲೆ ನಿಶ್ಚಿತ ಎಂಬ ವಾತಾವರಣವಿದೆ. ಕಳೆದ ಬಾರಿ ರಾಜ್ಯ ಹಾಗೂ ದೇಶದಲ್ಲಿ ಸಂಭವಿಸಿದ ಸಾವು-ನೋವಿನ ಸ್ಥಿತಿ ಬಗ್ಗೆ ಎಲ್ಲರಿಗೂ ಅರಿವಿರುವ ವಿಚಾರ. ಹಾಗಾಗಿ ಈಬಾರಿ ಪರಿಸ್ಥಿತಿ ಕೈಮೀರುವ ಮೊದಲೇ ಎಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ಕೋವಿಡ್ ಉಪಕರಣಗಳ ವ್ಯವಸ್ಥೆ, ಔಷಧಿ, ಆಂಬುಲೆನ್ಸ್ ಸೇರಿದಂತೆ ಎಲ್ಲಾರೀತಿಯ ವ್ಯವಸ್ಥೆಗಳನ್ನು ಸಿದ್ಧಪಡಿಸಲಾಗುತ್ತಿದೆ. ನಮಗೆ ಯಾವುದೇ ಸಭೆ-ಸಮಾರಂಭ ಮುಖ್ಯವಲ್ಲ, ಜನರ ಜೀವ ಮುಖ್ಯವಾಗಿದೆ. ತಜ್ಞರ ಸಲಹೆ ಮೇರೆಗೆ ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೆ ತರಬೇಕಾದ ಅಗತ್ಯವಿದೆ ಎಂದರು.

ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಟಫ್ ರೂಲ್ಸ್ ಅನಿವಾರ್ಯ. ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆಯೂ ಚಿಂತನೆ ನಡೆದಿದೆ. ಈಗಿರುವ ನೈಟ್ ಕರ್ಫ್ಯೂ ಜನವರಿ 7ರವರೆಗೆ ಇರಲಿದ್ದು, ಅದಕ್ಕೂ ಮುಂಚಿತವಾಗಿ ಜನವರಿ 3 ಅಥವಾ 4ರಂದು ಸಿಎಂ ನೇತೃತ್ವದಲ್ಲಿ ಮತ್ತೊಮ್ಮೆ ಅಧಿಕಾರಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ಟಫ್ ರೂಲ್ಸ್ ನಲ್ಲಿ ಯಾವೆಲ್ಲ ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರುವುದು ಖಚಿತವಾಗಿದೆ ಎಂದು ಹೇಳಿದರು.
ನಾಳೆಯಿಂದ ಮಕ್ಕಳಿಗೆ ಕೊರೊನಾ ಲಸಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button