ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕದ ನಯಾಗಾರ ಎಂದೇ ಕರೆಯಲ್ಪಡುವ ಗೋಕಾಕ ಫಾಲ್ಸ್ ಸೇರಿದಂತೆ ಮೂರು ಫಾಲ್ಸ್ ಗಲಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಗೋಕಾಕ ತಾಲೂಕಿನ ಗೋಕಾಕ ಫಾಲ್ಸ್, ಗೊಡಚಿನಮಲ್ಕಿ ಫಾಲ್ಸ್ ಮತ್ತು ದೂಪದಾಳಗಳಿಗೆ ಶನಿವಾರ, ಭಾನುವಾರ ಮತ್ತು ಸಾರ್ವಜನಿಕ ರಜಾ ದಿನಗಳಂದು ಪ್ರವಾಸಿಗರನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಮಳೆಗಾಲದ ಈ ದಿನಗಳಲ್ಲಿ ಮನದುಂಬಿ ದುಮ್ಮಿಕ್ಕುವ ಈ ಜಲಪಾತಗಳನ್ನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ವಿವಿಧ ಭಾಗಗಳಿಂದ ಪ್ರವಾಸಿಗರು ಬರುತ್ತಾರೆ.
ಆದರೆ ಈ ಬಾರಿ ಕೊರೋನಾ 3ನೇ ಅಲೆಯ ಆತಂಕವಿರುವ ಹಿನ್ನೆಲೆಯಲ್ಲಿ ವಿಶೇಷವಾಗಿ ಮಹಾರಾಷ್ಟ್ರದಿಂದ ಪ್ರವಾಸಿಗರು ಆಗಮಿಸುವುದರಿಂದ ದೊಡ್ಡ ಅಪಾಯವಾಗಬಹುದು ಎನ್ನುವ ಕಾರಣಕ್ಕಾಗಿ ಈ ನಿರ್ಧಾರ ಮಾಡಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಥಳೀಯ ತಹಸಿಲ್ದಾರರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಮುಂದಿನ ಆದೇಶದವರೆಗೆ ಸಾರ್ವಜನಿಕ ರಜಾದಿನಗಳಂದು ಈ ಫಾಲ್ಸ್ ಗಳ ಪ್ರವಾಸವನ್ನು ಕೈಗೊಳ್ಳುವಂತಿಲ್ಲ.
ಮಹಿಳೆ ಮೇಲೆ ಆಸಿಡ್ ದಾಳಿ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಏಕಕಾಲದಲ್ಲಿ 40 ಕಡೆಗಳಲ್ಲಿ 300 ಎಸಿಬಿ ಅಧಿಕಾರಿಗಳ ದಾಳಿ
ಮೂರು ದಿನಗಳ ಕಾಲ ಭಾರಿ ಮಳೆ; ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್
ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ