Latest

*ಸಾಲು ಸಾಲು ಹಗರಣ: ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪ್ರವಾಸೋದ್ಯಮ ಇಲಾಖೆಯ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣ ಬಾಗಲಕೋಟೆಯಲ್ಲಿ ನಡೆದಿದೆ.

2021ರಿಂದ 2024ರವರೆಗೆ ಪ್ರವಾಸೋದ್ಯಮ ಇಲಾಖೆಯ ಖಾತೆಯ ಹಣವನ್ನು ಅಕ್ರಮವಾಗಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಬಾಗಲಕೋಟೆ ಐಡಿಬಿಐ ಬ್ಯಾಂಕ್ ಮ್ಯಾನೇಜರ್ ಹಗೂ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೂರಜ್ ಸಾಗರ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಐಡಿಬಿಐ ಬ್ಯಾಂಕ್ ನ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿದ್ದಾನೆ.

ಪ್ರವಾಸೊದ್ಯಮ ಇಲಾಖೆಯ ಖಾತೆಯಿಂದ 2,47,73,999 ರೂ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ. ಅಕ್ರಮದಲ್ಲಿ ಬ್ಯಾಂಕ್ ನ ಇತರ ಸಿಬ್ಬಂದಿಗಳು, ಇಲಾಖೆ ಅಧಿಕಾರಿಗಳೂ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಬಾಗಲಕೋಟೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button