Kannada NewsLatestWorld

*ಪ್ರಯಾಣಿಕರ ಬೋಟ್ ನಲ್ಲಿ ಬೆಂಕಿ: ಐವರು ಸಾವು; 41 ಜನರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ಹಡಗಿನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. 41 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಇಂಡೋನೇಷ್ಯಾದ ಮಧುರಾ ದ್ವೀಪದ ಕರಾವಳಿಯಲ್ಲಿ ಈ ದುರಂತ ಸಂಭವಿಸಿದೆ. ಎಂಜಿನ್ ದೋಷ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Home add -Advt

ನೌಕಾಪಡೆ ಮತ್ತು ರಕ್ಷಣಾ ಸಿಬ್ಬಂದಿ ಬೃಹತ್ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಧುರಾ ದ್ವೀಪದಿಂದ ಹೊರಟಿದ್ದ ಪ್ರಯಾಣಿಕರ ಹಡಗಿನಲ್ಲಿ ಮಧ್ಯಾಹ್ನ ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಗೆ ಹಾಗೂ ದಟ್ಟ ಹೊಗೆ ಆವರಿಸಿದ್ದರಿಂದ ದೋಣಿಯಲ್ಲಿದ್ದ ಪ್ರಯಾಣಿಕರು ಪ್ರಾಣಭಯದಿಂದ ನೀರಿಗೆ ಜಿಗಿದಿದ್ದಾರೆ. ರಕ್ಷಣಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಕೆಲವರನ್ನು ರಕ್ಷಿಸಿವೆಯಾದರೂ, ಐದು ಜನರ ಮೃತದೇಹಗಳು ಸಮುದ್ರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಹಡಗಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರೆನ್ನಲಾಗಿದ್ದು, 41 ಜನರು ನಾಪತ್ತೆಯಾಗಿದ್ದಾರೆ. ಇವರಲ್ಲಿ ಹಲವರು ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಸಂಸ್ಥೆಯ ಹೆಲಿಕಾಪ್ಟರ್‌ಗಳು ಹಾಗೂ ಹೈ-ಸ್ಪೀಡ್ ಬೋಟ್‌ಗಳು ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ತೀವ್ರ ಶೋಧ ನಡೆಸಲಾಗುತ್ತಿದೆ.

Related Articles

Back to top button