
ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಾಚರಣಗೆ ಕ್ಷಣಗಣನೆ ಆರಂಭವಾಗಿದೆ ಮುಂಜಾಗೃತಾ ಕ್ರಮವಾಗಿ ರಾಜ್ಯದ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಬಳ್ಳಾಪುರದ ನಂದಿಗಿರಿಧಾಮ, ಚಿಕ್ಕಮಗಳೂರಿನ ಪ್ರವಾಸಿ ತಾಣಗಳು, ಚಾಮುಂಡಿ ಬೆಟ್ಟ, ತುವಕೂರಿನ ವಿವಿಧ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಸಲಾಗಿದೆ.
ತುಮಕೂರಿನ ದೇವರಾಯನದುರ್ಗ, ನಾಮದ ಚಿಲುಮೆ ಹಾಗೂ ಮಂದಾರಗಿರಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 8 ಗಂಟೆ ವರೆಗೆ ಹಾಗೂ ಜನವರಿ 1ರ ಸಂಜೆ 6 ರಿಂದ ಜನವರಿ 2ರ ಬೆಳಿಗ್ಗೆ 8 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಹೊಸ ವರ್ಷದ ಸಂದರ್ಭದಲ್ಲಿ ದೇವಸ್ಥಾನಗಳಿಗೆ ಹೋಗುವವರಿಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಹಗಲು ಹೊತ್ತಲಿ ನಿರ್ಬಂಧ ಸಡಿಲಿಸಲಾಗಿದೆ. ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶವಾಗಿರುವುದರಿಂದ ಈ ಭಾಗದಲ್ಲಿ ಹೊಸ ವರ್ಷದ ನೆಪದಲ್ಲಿ ಮೋಜು-ಮಸ್ತಿ ಮಾಡುವ ಸಧ್ಯತೆ ಇರುವುದರಿಂದ ನಿರ್ಬಂಧ ವಿಧಿಸಲಾಗಿದೆ.


