ಮತ್ತೆ ಬದಲಾಯ್ತು; ಸಿಎಂ ಬರ್ತಾರಂತೆ ಅಥಣಿಗೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆಯ ಪ್ರವಾಸ ಪಟ್ಟಿ ಮತ್ತೆ ಬದಲಾಗಿದೆ.
ನಾಳೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿಗೆ ಆಗಮಿಸಲಿದ್ದಾರೆ.
ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮತ್ತು ಮಾಜಿ ಸಚಿವ ಲಕ್ಷ್ಮಣ ಸವದಿ ಭಾನುವಾರ ರಾತ್ರಿ ಮುಖ್ಯಮಂತ್ರಿಯವರ ಮನೆಗೆ ತೆರಳಿ ವಿನಂತಿಸಿದ್ದಾರೆ.
ಈ ಹಿನ್ನೆಲೆಯಲ್ಲಿ , ಹೆಲಿಕಾಪ್ಟರ್ ಮೂಲಕ ಅಥಣಿಗೆ ಆಗಮಿಸಿ, ಅಲ್ಲಿಂದ ಸತ್ತಿ ಮತ್ತು ನಂದೇಶ್ವರಕ್ಕೆ ತೆರಳಿ ಪ್ರವಾಹ ಪರಿಸ್ಥಿತಿ ಅವಲೋಕಿಸಲಿದ್ದಾರೆ ಎಂದು ಕವಟಗಿಮಠ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಈ ಮೊದಲು ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪ್ರವಾಸವನ್ನು ರದ್ದುಪಡಿಸಲಾಗಿತ್ತು.
ಇದೀಗ ಜಿಲ್ಲೆಯ ಇಬ್ಬರು ಹಿರಿಯ ನಾಯಕರ ವಿನಂತಿಗೆ ಮುಖ್ಯಮಂತ್ರಿ ಸಮ್ಮತಿಸಿದ್ದು, ಬೆಳಗಾವಿ ಜಿಲ್ಲೆಗೂ ಬರಲು ಒಪ್ಪಿಕೊಂಡಿದ್ದಾರೆ.
ಈ ಬಾರಿ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ –
ಭಾನುವಾರವೂ ಬಿಡುವಿಲ್ಲದೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ನಾಳೆ ಸಿಎಂ ವೈಮಾನಿಕ ಸಮೀಕ್ಷೆ: ಎಲ್ಲಿ ಲ್ಯಾಂಡ್ ಆಗಲಿದ್ದಾರೆ?
ಮುಖ್ಯಮಂತ್ರಿ ಬೆಳಗಾವಿಗೆ ಏಕೆ ಬರುತ್ತಿಲ್ಲ? -ಇಲ್ಲಿದೆ ಕಾರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ