*ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ ಭೀಕರ ಅಪಘಾತ ಪ್ರಕರಣ; ಓರ್ವ ವಿದ್ಯಾರ್ಥಿನಿ ಸಾವು*


ಪ್ರಗತಿವಾಹಿನಿ ಸುದ್ದಿ; ಶಿರಸಿ: ಪ್ರವಾಸಕ್ಕೆಂದು ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳ ಟ್ರ್ಯಾಕ್ಟರ್ ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಪಿಯು ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ ಮೃತ ವಿದ್ಯಾರ್ಥಿನಿ. ಕಾವ್ಯಾ ಕಲ್ಲಹಕಲಾ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿಯ ಕೊಳಗಿ ಬಳಿ ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿತ್ತು. 26 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಗಾಯಾಳುಗಳಲ್ಲಿ 8 ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿತ್ತು. ಗಾಯಾಳುಗಳನ್ನು ಶಿರಸಿ ಪಂಡಿತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಓರ್ವ ವಿದ್ಯಾರ್ಥಿನಿ ಕಾವ್ಯಾ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಮಳಗಿಯಿಂದ ಪ್ರವಾಸಕ್ಕೆಂದು 90 ವಿದ್ಯಾರ್ಥಿಗಳು ಆಗಮಿಸಿದ್ದರು. ವಿದ್ಯಾರ್ಥಿ-ವಿದ್ಯಾರ್ಥಿನಿಯರ ತಂಡ 2 ಟ್ರ್ಯಾಕ್ಟರ್ ಗಳಲ್ಲಿ ಪ್ರವಾಸಕ್ಕೆ ತೆರಳಿದ್ದರು.
ಕೊಳಗಿ ಬಳಿ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ 26 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ 8 ಜನ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದರು.
ಕಾಂಗ್ರೆಸ್ ಬಸ್ ಯಾತ್ರೆ ಹೆಸರು ಫೈನಲ್: ಬುಧವಾರ ಬೆಳಗಾವಿಯಲ್ಲಿ ಆರಂಭ
https://pragati.taskdun.com/congress-bus-yatra-name-final-starts-in-belgaum-on-wednesday/