Kannada NewsKarnataka NewsLatestPolitics

*ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ ವಿಪಕ್ಷಗಳಿಗೆ ಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಸರ್ಕರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷ ನಾಯಕರು ಟೀಕಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ತಿರಿಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳನ್ನು ನೀಡಿಲ್ಲವಾದ್ದರಿಂದ ಅವರಿಗೆ ಈ ಯೋಜನೆಗಳು ನುಂಗಲಾರದ ತುತ್ತಾಗಿವೆ. ಹಾಗಾಗಿ ಅನಗತ್ಯವಾಗಿ ಗ್ಯಾರಂಟಿ ಯೋಜನೆ ಬಗ್ಗೆ ಅವರು ಟೀಕೆ ಮಾಡುತ್ತಿದ್ದಾರೆ ಎಂದರು.

Home add -Advt

ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂದು ಮಾಜಿ ಹೆಚ್.ಡಿ. ಕುಮಾರಸ್ವಾಮಿ ಅವರು ಟೀಕಿಸಿದ್ದು, ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ. ಅವರ ಟೀಕೆಗೆ ನಾನು ಉತ್ತರಿಸುವುದಿಲ್ಲ ಎಂದರು.

ಇದೇ ವೇಳೆ ಮೂರು ಡಿಸಿಎಂ ಸ್ಥಾನದ ಬಗ್ಗೆ ಕೇಳಿದ ಪ್ರಶ್ನೆಗೆ ಈ ಬಗ್ಗೆ ಚರ್ಚಿಸುವುದಿಲ್ಲ ಎಂದು ಉತ್ತರ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು.


Related Articles

Back to top button