
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬಿಚ್ಕುಂದ ಮಂದಲಂನ ಚಿನ್ನದೇವಾಡ ಗ್ರಾಮದಲ್ಲಿ ನಡೆದಿದೆ.
ಮದುವೆಗೆ ಟ್ರ್ಯಾಕ್ಟರ್ ನಲ್ಲಿ ಸಾಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ