Kannada NewsKarnataka NewsLatest

*ಜಾತ್ರೆ ನೋಡುತ್ತಿದ್ದಾಗ ದುರಂತ: ಸಂಬಂಧಿಕರಿಗೆ ಮದುವೆ ಆಮಂತ್ರಣ ನೀಡಲು ಬಂದಿದ್ದ ಯುವಕ ಟ್ರ್ಯಾಕ್ಟರ್ ಹರಿದು ಸಾವು*

ಪ್ರಗತಿವಾಹಿನಿ ಸುದ್ದಿ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ.

ಬೆಂಗಳೂರಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಯುವಕ ಸ್ಥಳದಲೇ ಸಾವನ್ನಪ್ಪಿದ್ದಾರೆ.

ಅಕ್ಷತ್ (27) ಮೃತ ಯುವಕ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ.

ಬನಶಂಕರಿ ನಿವಾಸಿಯಾಗಿರುವ ಅಕ್ಷತ್​​, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಹಾಗೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಟ್ರ್ಯಾಕ್ಟರ್​ ಚಾಲಕನ ಅಜಾಗರೂಕತೆಯಿಂದಲೇ ಅಪಘಾತ ನಡೆದಿದೆ ಎನ್ನಲಾಗಿದೆ. ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Home add -Advt

ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button