Belagavi NewsBelgaum NewsKannada NewsKarnataka NewsNationalPolitics

*ಕೃಷ್ಣ ನದಿಯಲ್ಲಿ ಪಲ್ಟಿಯಾದ ಎಂಟು ಜನರಿದ್ದ ಟ್ರ್ಯಾಕ್ಟರ್‌: ಇಬ್ಬರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲೂಕಿನ ಅಕಿವಾಟ್-ಬಸ್ತವಾಡ್ ರಸ್ತೆಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ಸುಮಾರು ಎಂಟು ಜನರು ಕೃಷ್ಣಾ ನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಆಘಾತಕಾರಿ ಘಟನೆ ಇಂದು ಬೆಳಗ್ಗೆ ನಡೆದಿದೆ.

ಇಬ್ಬರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರಲ್ಲಿ ಅಕ್ಕಿವಾಟ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಇಕ್ಬಾಲ್ ಬೈರಾಗದಾರ ಸಹ ಸೇರಿದ್ದಾರೆ ಎನ್ನಲಾಗಿದೆ. ಅಕ್ಕಿವಾಟ್ , ಗ್ರಾಮಕ್ಕೆ ಕುಡಿಯುವ ನೀರು ಒದಗಿಸಲು ಮೋಟಾರ್ ಸ್ಟಾರ್ಟ್ ಮಾಡಲು ಅಕ್ಕಿವಾಟ್ – ಬಸ್ತವಾಡ್ ರಸ್ತೆಯಿಂದ ತೆರಳುತ್ತಿದ್ದ ಟ್ರ್ಯಾಕ್ಟರ್‌ ನಲ್ಲಿ ಒಟ್ಟು 8 ಮಂದಿ ಇದ್ದರು ಎನ್ನಲಾಗಿದೆ. ಈ ವೇಳೆ ಕೃಷ್ಣಾ ನದಿಯಲ್ಲಿ ಉಂಟಾದ ಪ್ರವಾಹದಿಂದ ನೀರಿನ ಹರಿವಿಗೆ ಎಲ್ಲರೂ ಕೊಚ್ಚಿ ಹೋಗಿದ್ದಾರೆ.

Home add -Advt

ಈ ಘಟನೆಯ ಬಗ್ಗೆ ತಿಳಿದ ತತ್‌ ಕ್ಷಣ ತಾಲೂಕು ಆಡಳಿತವು ಯಾಂತ್ರಿಕ ದೋಣಿ ಮೂಲಕ ವಿಪತ್ತು ನಿರ್ವಹಣಾ ಸಿಬಂದಿಯ ಸಹಾಯದಿಂದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು,8 ಮಂದಿಯ ಪೈಕಿ ಆರು ಮಂದಿಯನ್ನು ರಕ್ಷಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಲಾಪುರ ಜಿಲ್ಲಾ ಉಸ್ತುವಾರಿ ಅಶೀವ್‌ ಹಸನ್‌ ಮುಶ್ರಿಫ್ ಹಾಗೂ ಮಹಾರಾಷ್ಟ್ರದ ಸಂಸದ ಧೈರ್ಯಶೀಲ ಮಾನೆ ಭೇಟಿ ನೀಡಿದ್ದಾರೆ.

Related Articles

Back to top button