
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೊನೋಳಿ ಗ್ರಾಮದಲ್ಲಿ ಯುವ ಕಾಂಗ್ರೆಸ್ ಹಾಗೂ ಲಕ್ಷ್ಮೀ ತಾಯಿ ಫೌಂಡೇಷನ್ ಪ್ರಾಯೋಜಕತ್ವದಲ್ಲಿ ಟ್ರ್ಯಾಕ್ಟರ್ ಓಟದ ಸ್ಪರ್ಧೆ ನಡೆಯಿತು.
ಯುವಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೃಣಾಲ ಹೆಬ್ಬಾಳಕರ್ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ ವಿಶಿಷ್ಟವಾದ ಆಟ, ಕಾರ್ಯಕ್ರಮಗಳು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ವರ್ಷವಿಡೀ ದುಡಿಯುವ ರೈತರಿಗೆ ಇದೊಂದು ಮನರಂಜನೆಯಾಗಿದೆ. ರೈತರ ಬೆವರ ಹನಿಗೆ ಯಾವುದೇ ಬೆಲೆ ಕಟ್ಟಲು ಸಾಧ್ಯವಿಲ್ಲ. ಹಾಗಾಗಿ ಅವರನ್ನು ಪ್ರೋತ್ಸಾಹಿಸಲು, ಅವರ ಬೆನ್ನಿಗೆ ನಾವಿದ್ದೇವೆ ಎನ್ನುವುದನ್ನು ತೋರಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಮೃಣಾಲ ಹೆಬ್ಬಾಳಕರ್ ಹೇಳಿದರು.
ಸ್ಥಳೀಯ ಮುಖಂಡರು, ನಾಗರಿಕರು, ಯುವಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ