ಪ್ರಗತಿವಾಹಿನಿ ಸುದ್ದಿ: ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಈ ದುರಂತ ಸಂಭವಿಸಿದೆ. ಟ್ರಾಕ್ಟರ್ ಹರಿದ ಪರಿಣಾಮ 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.
ಮಗು ಮನೆ ಬಳಿ ನಿಂತಿದ್ದಾಗ ಏಕಾಏಕಿ ಬಂದ ಟ್ರ್ಯಾಕ್ಟರ್ ಮಗುವಿನ ಮೇಲೆಯೇ ಹರಿದು ಹೋಗಿದೆ. ದುರಂತದ ಬಳಿಕ ಟ್ರ್ಯಾಕ್ಟರ್ ಚಾಲಕ ಎಸ್ಕೇಪ್ ಆಗಿದ್ದಾನೆ
ಈ ಬಗ್ಗೆ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.


