
ಪ್ರಗತಿವಾಹಿನಿ ಸುದ್ದಿ; ಧಾರವಾಡ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯರಿಕೊಪ್ಪ ಗ್ರಾಮದ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರು ನಿವಾಸಿ ಶಿವಾನಂದ ಹಡಪದ ಮೃತ ಪಿಡಿಒ. ಹಾವೇರಿ ಜಿಲ್ಲೆಯ ಶಿರಬಡಗಿ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ