Latest

ಟ್ರ್ಯಾಕ್ಟರ್ ಪಲ್ಟಿಯಾಗಿ 6 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ 6 ಜನರು ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಮಿಳುನಾಡು ಗಡಿಯಲ್ಲಿ ನಡೆದಿದೆ.

ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಬ್ರೇಕ್ ಫೇಲ್ ಆಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಮನಗರ ಜಿಲ್ಲೆ ಕೆರಳಾಳುಸಂದ್ರ ಗ್ರಾಮದವರು ಎನ್ನಲಾಗಿದೆ.

ಟ್ರ್ಯಾಕ್ಟರ್ ನಲ್ಲಿ 15ಕ್ಕೂ ಹೆಚ್ಚು ಜನರು ತಮಿಳುನಾದಿನ ದೆಬ್ಬಾಗುಳೇಶ್ವರ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button